ಅಂಕೋಲಾ: ಯಲ್ಲಾಪುರ ಹಾಗೂ ಅಂಕೋಲಾ ತಾಲೂಕನ್ನು ಸಂಪರ್ಕಿಸುವ ಗುಳ್ಳಾಪುರ – ಹಳವಳ್ಳಿ ನೂತನ ಸೇತುವೆಗೆ ₹.25 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಮಳೆಗಾಲದಲ್ಲಿ ಪ್ರವಾಹಕ್ಕೆ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕನ್ನು ಸಂಪರ್ಕಿಸುವ ಗುಳ್ಳಾಪುರ – ಹಳವಳ್ಳಿ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿತ್ತು.
ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಸಚಿವ ಹೆಬ್ಬಾರ್ ಮನವಿಯ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಆಗಮಿಸಿ ಪರಿಶೀಲನೆ ನಡೆಸಿದ್ದಲ್ಲದೇ ನೂತನ ಸೇತುವೆ ನಿರ್ಮಾಣದ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.
ಇದೀಗ ನೂತನ ಸೇತುವೆ ನಿರ್ಮಾಣಕ್ಕೆ 25 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಈ ಭಾಗದ ಬಹು ಅಗತ್ಯದ ಬೇಡಿಕೆಗೆ ಶೀಘ್ರವಾಗಿ ಅನುದಾನವನ್ನು ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಚಿವ ಹೆಬ್ಬಾರ್ ತಿಳಿಸಿದ್ದಾರೆ.