
ಶಿರಸಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿನ ಜಾನ್ಮನ್ವ್ ಗ್ರಾ.ಪಂ ವ್ಯಾಪ್ತಿಯ ರೇವಣಕಟ್ಟಾ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸರ್ಕಾರದಿಂದ ಹೆಚ್ಚಿನ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ