ದಾಂಡೇಲಿ: ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ದ್ವಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಜೊಯಿಡಾ ತಾಲ್ಲೂಕಿನ ಪ್ರಧಾನಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆಯ ಎರೋಡಾ, ಶಾಸ್ತ್ರಿ ನಗರದ ನಿವಾಸಿ 44 ವರ್ಷ ವಯಸ್ಸಿನ ಹರ್ಷದ್ ಕರಂದಿಕರ ಎಂಬಾತನೆ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತನು ದ್ವಿಚಕ್ರ ವಾಹನದಲ್ಲಿ ಜೊಯಿಡಾ ತಾಲ್ಲೂಕಿನ ಗುಂದದಿಂದ ದಾಂಡೇಲಿಗೆ ಬರುತ್ತಿದ್ದಾಗ ಪ್ರಧಾನಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಅತೀಯಾದ ವೇಗದಿಂದ ಬಂದ ಪರಿಣಾಮವಾಗಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಸಂಭವಿಸಿದೆ.
ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಹರ್ಷದ್ ಕರಂದಿಕರನ ಕಾಲು ತುಂಡಾಗಿದೆ. ತೀವ್ರ ಸ್ವರೂಪದ ಗಾಯಗೊಂಡಿದ್ದ ಈತನಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಐ.ಆರ್.ಗಡ್ಡೇಕರ ಅವರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.