Slide
Slide
Slide
previous arrow
next arrow

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

300x250 AD

ಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡಾಕೂಟ ಆಯೋಜಿಸಿರುವುದು ಒಂದು ಉತ್ತಮ ಕೆಲಸ.. ಈ ರೀತಿಯ ಕ್ರೀಡಾಕೂಟ ಆಯೋಜಿಸುವುದರಿಂದ ಸದಾ ತಮ್ಮದೆ ಆದ ಕೆಲಸದ ಒತ್ತಡದಲ್ಲಿರುವ ನೌಕರರ ಮನಸ್ಸಿಗೆ ಉಲ್ಲಾಸ ಸಿಗಲಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದರು.

ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಆಯೋಜಿಸಿದ್ದ ಕ್ರೀಡಾಕೂಟದ ಧ್ವಜಾರೋಹಣವನ್ನು ಅವರು ನೆರವೇರಿಸಿ ಮಾತನಾಡಿದರು. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಚಾಲನೆ ನೀಡಿದರು.

300x250 AD

ಮನಸ್ಸು ಮತ್ತು ದೇಹ ಸದಾ ಚೈತನ್ಯದಿಂದ ಇರಬೇಕಾದರೇ ಈ ರೀತಿಯ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರಿ ನೌಕರರು ಕೆಲಸದ ಒತ್ತಡ, ಮನೆಯ ಒತ್ತಡ ಸೇರಿದಂತೆ ಸಾಕಷ್ಟು ಒತ್ತಡದಲ್ಲಿರುತ್ತೀರಾ, ಪ್ರತಿನಿತ್ಯ ಕನಿಷ್ಠ ಅರ್ಧ ಗಂಟೆಯಾದರೂ ಯೋಗ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ 30-35 ಲಕ್ಷ ಮಾತ್ರ ನೀಡುತ್ತಿದ್ವು. ಆದರೆ, ನಮ್ಮ ಸರ್ಕಾರ ಬಂದ ಮೇಲೆ ಎರಡು ಕೋಟಿ ಅನುದಾನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅನುದಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

Share This
300x250 AD
300x250 AD
300x250 AD
Back to top