ಸಿದ್ದಾಪುರ: ತಾಲೂಕಿನ ಕೊಂಡ್ಲಿ ಗ್ರಾಮದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಉದ್ಘಾಟಿಸಿ ಮಾತನಾಡಿದರು
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳಬೇಕಾದರೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕೆಂದು ಹೇಳಿದರು. ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತಗೊಳ್ಳಬಾರದು. ಇದರ ಜೊತೆಗೆ ಪಠೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ವ್ಯಕ್ತಿತ್ವ ವಿಕಸನಗೊಳ್ಳಲ್ಲಿದೆ ಎಂದ ಅವರು, ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ಬಳಸುವುದರಿಂದ ಸ್ವಲ್ಪ ದೂರ ಇರಬೇಕು. ಒಂದು ವೇಳೆ ಮೊಬೈಲ್ ಅತೀ ಹೆಚ್ಚು ಬಳಿಸಿದರೆ ನಿಮ್ಮ ಭವಿಷ್ಯವನ್ನೇ ಅದು ಹಾಳು ಮಾಡಲಿದೆ ಎಂದು ಸೂಚ್ಯವಾಗಿ ಎಚ್ಚರಿಸಿದರು.
ಎಸ್ಎಸ್ಎಲ್‌ಸಿ ನಂತರ ಪಿಯುಸಿಗೆ ಹೋಗುವ ವಿದ್ಯಾರ್ಥಿಗಳಿಗೆ ಸ್ವತಂತ್ರ ಸಿಗುತ್ತದೆ.ಅದನ್ನು ದುರುಪಯೋಗ ಮಾಡಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ನಮ್ಮ ಸಂಸ್ಕೃತಿ ಪರಂಪರೆಯನ್ನು ಮೈಗೂಡಿಸಿಕೊಳ್ಳಲು ಸಂಸ್ಕಾರಯುತ ಶಿಕ್ಷಣ ಪಡೆಯಬೇಕು, ವಿದ್ಯಾವಂತರಾದ ಮೇಲೆ ತಂದೆ ತಾಯಿಯರನ್ನು ನೋಡಿಕೊಳ್ಳದೆ ಅವರನ್ನು ವೃದ್ಧಾಶ್ರಮಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ವೃದ್ಧಾಶ್ರಮಗಳು ಸಹ ಹೆಚ್ಚಾಗುತ್ತದೆ. ವಿದೇಶಗಳಲ್ಲಿ ಕೆಲಸ ಮಾಡುವುದರಿಂದ ತಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ ಎಂಬ ಪರಿಕಲ್ಪನೆ ಹೊಂದಿರುತ್ತಾರೆ. ಅದರ ಬದಲಾಗಿ ನಮ್ಮದೇಶದಲ್ಲಿ, ಹಳ್ಳಿಗಳಲ್ಲಿ ಸಾಕಷ್ಟು ಸಾಧನೆ ಮಾಡುವ ಅವಕಾಶವಿದೆ. ಹೆಚ್ಚಿನ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಜಿ.ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಸಂತ್ ನಾಯ್ಕ, ವಿನಯ ಬಂಡೇಗುಂಡಿ, ಪಂಚಾಯತ್ ಸದಸ್ಯರು, ಹಿರಿಯರು, ಸಮಾಜ ಸೇವಕರು ಹಾಗೂ ಊರ ಪ್ರಮುಖರು ಇದ್ದರು.