ಅಂಕೋಲಾ: ತಾಲೂಕಿನ ಹೆಗ್ರೆ ಊರಿನಲ್ಲಿ ಸಸ್ಯೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಯುವ ಮಿತ್ರಕೂಟ ಹೆಗ್ರೆ ವತಿಯಿಂದ ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡರವರು ಶಾಲಾ ಆವರಣದಲ್ಲಿ ಕಲ್ಪವೃಕ್ಷವನ್ನು ನೆಡುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವೃಕ್ಷಮಾತೆ ತುಳಸಿ ಗೌಡ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ತುಳಸಿ ಗೌಡರವರು ಗಿಡ ಮರಗಳಿಗೂ ಮನುಷ್ಯರಂತೆ ಜೀವ ಇದೆ, ಗಿಡ ಮರಗಳನ್ನು ನೆಟ್ಟು ಬೆಳೆಸುವುದು ಪುಣ್ಯದ ಕೆಲಸ, ಗಿಡ ಮರಗಳ ಸಂರಕ್ಷಣೆಯ ಮಹತ್ತ್ವ ಇತ್ಯಾದಿಯಾಗಿ ಮಾತನಾಡಿ ಎಲ್ಲರನ್ನೂ ಆಶೀರ್ವದಿಸಿ ಪ್ರೇರೆಪಿಸಿದರು. ಹಾಗೆಯೇ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಕ್ಕ ಪಕ್ಕದ ಊರಿನ ಗ್ರಾಮಸ್ಥರಿಗೆ ಹಾಗೂ ಊರಿನ ಗ್ರಾಮಸ್ಥರಿಗೆ ಗಿಡಗಳನ್ನು ವಿತರಿಸಲಾಯಿತು.