ದಾಂಡೇಲಿ: ತಾಲ್ಲೂಕು ಸಾರ್ವಜನಿಕ ಆರೋಗ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ ದಾಂಡೇಲಿ, ತಾಲ್ಲೂಕಾಡಳಿತ ಮತ್ತು ನಗರಾಡಳಿತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ನಿಮಿತ್ತ ಜಾಗೃತಿ ಜಾಥಾ ಕಾರ‍್ಯಕ್ರಮವನ್ನು ಬಂಗೂರನಗರ ಸರಕಾರಿ ಹಿ.ಪ್ರಾ.ಶಾಲೆಯ ಆವರಣದಿಂದ ಮಂಗಳವಾರ ಹಮ್ಮಿಕೊಳ್ಳಲಾಯಿತು.
ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೌರಾಯುಕ್ತರಾದ ಆರ್.ಎಸ್.ಪವಾರ್, ಜಿಲ್ಲಾ ಮೆಡಿಕಲ್ ಆಪೀಸರ್ ಡಾ.ರಮೇಶ್ ರಾವ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಭೀಮಣ್ಣ ಶಿನ್ನೂರು, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಾಜೇಶ ಪ್ರಸಾದ್, ಡಾ.ತ್ರಿವೇಣಿ, ಬಂಗೂರ ನಗರ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಯರಾದ ಎ.ಎಫ್. ಭಜಂತ್ರಿ, ಆರೋಗ್ಯ ನಿರೀಕ್ಷಕರಾದ ಚೆನ್ನಬಸವರಾಜ್, ವಸಂತ, ನಾಗರಾಜ ಹೊಸಮನಿ ಮೊದಲಾದವರು ಉಪಸ್ಥಿತರಿದ್ದರು.
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾದಲ್ಲಿ ಬಂಗೂರನಗರ ಸರಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು, ಆರೋಗ್ಯ ಕಾರ‍್ಯಕರ್ತೆಯರು, ಆಶಾ ಕಾರ‍್ಯಕರ್ತೆಯರು, ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಭಾಗವಹಿಸಿದ್ದರು.