• first
    second
    third
    previous arrow
    next arrow
  • ತಂಬಾಕಿನ ದುಷ್ಪರಿಣಾಮದ ಅರಿವಿದ್ದರೂ ಬಳಸುವುದು ನಾಗರಿಕ ಸಮಾಜದ ಲಕ್ಷಣವಲ್ಲ: ಉಪೇಂದ್ರ ಪೈ

    300x250 AD

    ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆ ಶಾಲೆಯ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆಯ ಶಿರಸಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಸಹಯೋಗದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಉದ್ಘಾಟಿಸಿದರು.

    ನಂತರ ಮಾತನಾಡಿದ ಅವರು ತಂಬಾಕು ಉತ್ಪನ್ನಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತದೆ ಎಂಬ ಸತ್ಯದ ಅರಿವಿದ್ದರೂ ಬಳಸುತ್ತಿರುವುದು ನಾಗರಿಕ ಸಮಾಜದ ಲಕ್ಷಣವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಜಗತ್ತಿನಲ್ಲಿ ತಂಬಾಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ಇದರ ಬಗ್ಗೆ ನಿತ್ಯ ಪತ್ರಿಕೆಗಳಲ್ಲಿ, ಟಿವಿ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸುವಂತಹ ಪ್ರಯತ್ನ ನಡೆಯುತ್ತಲೇ ಇವೆ.ಆದರೂ ಸೇವಿಸುವವರ ಸಂಖ್ಯೆಯಲ್ಲಿ ಇಳಿಮುಖವಾಗಿಲ್ಲ ಎಂದರೆ ಏನರ್ಥ.ಇದಕ್ಕೆ ಯಾರನ್ನು ಹೊಣೆ ಮಾಡುವುದು ಎಂದರು.

    ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ರಾಷ್ಟೀಯ ಪ್ರಶಸ್ತಿ ವಿಜೇತ ಜಿ.ಜಿ.ಹೆಗಡೆ ಬಾಳಗೋಡ ಮಾತನಾಡಿ, ಬೀಡಿ,ಸಿಗರೇಟು ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಬಳಸಿದರೆ ನಮಗೆ ಸಾವು ಸಮೀಪಿಸುತ್ತಿದೆ ಎಂದೇ ಅರ್ಥವಾಗಿದೆ.ಕ್ಷಣಿಕ ಮತ್ತಿನ ಸುಖವನ್ನು ನೀಡುವ ತಂಬಾಕು ನಮ್ಮ ದೇಹದ ಆರೋಗ್ಯವನ್ನೇ ವ್ಯತ್ಯಯಗೊಳಿಸಿ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಎಂದು ಹೇಳಿದರು.

    300x250 AD

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಷ ಕಾನಸೂರು ಮಾತನಾಡಿ, ಕ್ಯಾನ್ಸರ್ ನಂತಹ ಮಾರಣಾಂತಿಕ ರೋಗವನ್ನು ನಮಗೆ ಬಳುವಳಿಯಾಗಿ ನೀಡುತ್ತದೆ. ಆದ್ದರಿಂದ ದುಡಿಯುವ ವರ್ಗದ ಜನರು ತಂಬಾಕು ಉತ್ಪನ್ನಗಳನ್ನು ಬಳಸದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

    ಮುಖ್ಯ ಅತಿಥಿಗಳಾಗಿ ಹಾಳದಕಟ್ಟಾ ಶಿಕ್ಷಕ ಜಿ.ಐ.ನಾಯ್ಕ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಜಯಂತಿ, ಶಿಕ್ಷಕ ವೃಂದದವರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Share This
    300x250 AD
    300x250 AD
    300x250 AD
    Back to top