ಭಟ್ಕಳ: ತಾಲೂಕಿನ ಹೆಬಳೆ ಗ್ರಾಮ ಪಂಚಾಯತ ವ್ಯಾಪ್ತಿಯ ಸ.ನಂ.410 ರ ಪೈಕಿ ಕ್ಷೇತ್ರ 10 ಗುಂಟೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡುವುದನ್ನು ನಿಲ್ಲಿಸಿ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಹೆಬಳೆ ಗ್ರಾಮಸ್ಥರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಯಿಂದ ಈ ಭಾಗದ ಮನೆಗಳ ಬಾವಿಗಳು ಕಲುಷಿತಗೊಳ್ಳಲಿವೆ. ಇದರಿಂದ ಮನೆಯಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದವರಿಗೆ ನೀರಿಗಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ. ಮೊದಲೇ ಮಳೆಗಾಲ ಆರಂಭಗೊಂಡಿದೆ. ಮಳೆಯ ನೀರಿನಿಂದ ಅನೇಕಾನೇಕ ಸಮಸ್ಯೆಗಳು ಎದುರಾಗಲಿದ್ದು, ಈ ಮಧ್ಯೆ ಇಲ್ಲಿಯೇ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿದ್ದಲ್ಲಿ ಜನರು ಬದುಕು ಸಾಗಿಸುವುದೇ ದುಸ್ತರವಾಗಲಿದೆ. ಆದ್ದರಿಂದ ನಮ್ಮ ವ್ಯಾಪ್ತಿಯಲ್ಲಿ ನೀರಿನ ಹಾಗೂ ಪರಿಸರ ಮಾಲಿನ್ಯವಾಗುವ ಲಕ್ಷಣಗಳಿದ್ದು, ಸದ್ಯ ನಿಗದಿ ಮಾಡಿದ ತ್ಯಾಜ್ಯ ವಿಲೇವಾರಿ ಘಟಕವನ್ನು ಬೇರೆಡೆ ಸ್ಥಳಾಂತರಿಸುವಂತೆ ಮನವಿ ಮಾಡಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರಾದ ಅಪ್ರೀನ್, ರುಕ್ಸರ್ ಮುಂತಾದವರು ಇದ್ದರು