ಶಿರಸಿ: ತಾಲೂಕಿನ ಬಿಸಲಕೊಪ್ಪ ಪಂಚಾಯತ ವ್ಯಾಪ್ತಿಯಲ್ಲಿನ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಯಲ್ಲಾಪುರದ ಧಾತ್ರಿ ಫೌಂಡೇಶನ್ ಮುಖ್ಯಸ್ಥರಾದ ಶ್ರೀನಿವಾಸ ಭಟ್ಟ ಧಾತ್ರಿ ನೇತೃತ್ವದಲ್ಲಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಪಠ್ಯ ಪುಸ್ತಕಗಳು ಓದುವ ಹಂಬಲವಿರುವ ಬಡ ಮಕ್ಕಳಿಗೆ ಹೊರೆಯಾಗದೇ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎನ್ನುವ ಸದಾಶಯದೊಂದಿಗೆ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಅಶೋಕ ಹೆಗಡೆ ಶಿವಳ್ಳಿ, ಪಂಚಾಯತ ಸದಸ್ಯರಾದ ರಾಘವೇಂದ್ರ ನಾಯ್ಕ, ವಿದ್ಯಾಧರ ಭಟ್ಟ ಸೇರಿದಂತೆ ಶಾಲಾ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.