
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿಪದಕ ಗೆಲ್ಲುವುದರ ಮೂಲಕ ಶುಭಾರಂಭ ಮಾಡಿದ್ದಾರೆ.
ಮಹಿಳೆಯರ 49 ಕೆಜಿ ವಿಭಾಗದಲ್ಲಿ ವೇಟ್ ಲಿಫ಼್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದ್ದು ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
26 ವರ್ಷದ ಮೀರಾಬಾಯಿ ಚಾನು 202ಕೆಜಿ ಭಾರ ಎತ್ತುವ ಮೂಲಕ ಎರಡನೇ ಸ್ಥಾನ ಪಡೆದರೆ ಚೀನಾದ ಜಿಹ್ವಾಯ್ ಹೌ 210ಕೆಜಿ ಭಾರ ಎತ್ತಿ ಮೊದಲ ಸ್ಥಾನ ಪಡೆದಿದ್ದಾರೆ.