ಶಿರಸಿ :ತಾಲೂಕಿನ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಕುಮಾರ ಸಮರ್ಥ ಜಿ ಹೆಗಡೆ ಪರಿಸರ ದಿನಾಚರಣೆಯ ಅಂಗವಾಗಿ ವಿಜಯವಾಣಿಯವರು ಟಿ.ಎಸ್.ಎಸ್. ಆವಾರದಲ್ಲಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈತನ ಸಾಧನೆಗೆ ಶಾಲಾ ಆಡಳಿತ ಮಂಡಳಿ ಪ್ರಾಚಾರ್ಯರು, ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಚಿತ್ರಕಲಾ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ಸಮರ್ಥ್ ಹೆಗಡೆ
