ಯಲ್ಲಾಪುರ: ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಲಾರಿ ಸುಟ್ಟು ಹೋದ ಘಟನೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಹೊಸಪೇಟೆಯಿಂದ ಮಂಗಳೂರಿಗೆ ಮ್ಯಾಂಗನೀಸ್ ಸಾಗಿಸುತ್ತಿದ್ದ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸುವಷ್ಟರಲ್ಲಿ ಲಾರಿ ಸುಟ್ಟು ಕರಕಲಾಗಿತ್ತು. ಯಾರಿಗೂ ಅಪಾಯ ಉಂಟಾಗಿಲ್ಲ. ಘಟನೆಯಿಂದ ಒಂದೆರಡು ತಾಸುಗಳ ಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.
ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿಕೊಂಡ ಬೆಂಕಿ: ಲಾರಿ ಸಂಪೂರ್ಣ ಭಸ್ಮ
