ಯಲ್ಲಾಪುರ: ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಬೆಲ್ಲವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಅರಬೈಲ್ ಘಟ್ಟದ ಯೂಟರ್ನ್ ಬಳಿ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿ ಇದ್ದ ಬೆಲ್ಲ ಚೆಲ್ಲಿ ರಸ್ತೆಯ ಮೇಲೆ ಹರಿದಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ರಸ್ತೆಯನ್ನು ಸ್ವಚ್ಛಗೊಳಿಸಿ, ವಾಹನಗಳ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಂಡರು. ಅಪಘಾತದಲ್ಲಿ ಟ್ಯಾಂಕರ್ ಜಖಂಗೊಂಡಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆತನನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.