ಹಳಿಯಾಳ: ತಾಲೂಕಿನ ಬಾಣಸಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಾಗೂ ಬಿತ್ತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತಿ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯ ಕುರಿತು ಹಾಗೂ ಪರಿಸರದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ವಲಯ ಅರಣ್ಯಾಧಿಕಾರಿ ನರೇಶ್ ಮಾತನಾಡಿ, ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಹಾಗೂ ವಿದ್ಯಾರ್ಥಿಗಳು ಪರಿಸರಕ್ಕೆ ನೀಡಬಹುದಾದ ಕೊಡುಗೆಗಳನ್ನು ತಿಳಿಸಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆಸಲಾದ ಚಿತ್ರಕಲೆ, ಪ್ರಬಂಧ ಹಾಗೂ ಆಶುಭಾಷಣ ಸ್ಪರ್ಧೆಯಲ್ಲಿ ಗೆದ್ದಂತಹ ವಿದ್ಯಾರ್ಥಿಗಳಿಗೆ ಸಾಮಾಜಿಕ ಅರಣ್ಯ ವಲಯ ಕಾರವಾರ ವತಿಯಿಂದ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು ಹಾಗೂ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು ಹಾಗೂ ಬೀಜಗಳನ್ನು ಬಿತ್ತಲಾಯಿತು.
ಪ್ರಾಂಶುಪಾಲರಾದ ಸುಚಿತ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿ.ಕೆ ಹಳ್ಳಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ವೈದ್ಯಾಧಿಕಾರಿಗಳು, ಶಾಲಾ ಶಿಕ್ಷಕ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರವಾರ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಕಿರಣ್ ಆರ್.ಮನವಾಚಾರಿ ಹಾಗೂ ಉಪವಲಯ ಅರಣ್ಯಾಧಿಕಾರಿ ದರ್ಶನ್ ಹೆಚ್.ಬಿ. ಎಲ್ಲಾ ಅತಿಥಿಗಳಿಗೂ ಕೃತಜ್ಞತಾ ಪೂರ್ವಕವಾಗಿ ಒಂದೊಂದು ಸಸಿಗಳನ್ನು ಹಾಗೂ ನೆನಪಿನ ಕಾಣಿಕೆಯನ್ನು ಕೊಟ್ಟು ಬೀಳ್ಕೊಡಲಾಯಿತು.