ಅಂಕೋಲಾ: ವಿದ್ಯಾರ್ಥಿಗಳಿಗೆ ಸಂಸತ್ತಿನ ಮಹತ್ವವನ್ನು ತಿಳಿಸಿ, ಎಲ್ಲರೂ ಸಂಸತ್ತಿನ ನಿಯಮಗಳನ್ನು ಪಾಲಿಸಬೇಕು ಎಂದು ಪಿ.ಎಂ. ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶೀಲಾ ಬಂಟ ಹೇಳಿದರು.
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುವುದು ಹಾಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ಸಂಸತ್ತನ್ನು ಆರಂಭಿಸಿದ್ದು, ಅದರ ಉದ್ಘಾಟನಾ ಸಮಾರಂಭ ಪಿ.ಎಂ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಪಿ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಕೋಮಲಾ ಹಿರೇಮಠ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ಸುಮಾ ಗೌಡ ಕಾರ್ಯಕ್ರಮ ನಿರ್ವಹಿಸಿದರೆ, ಶಿಕ್ಷಕ ಆನಂದು ಎಸ್.ನಾಯ್ಕ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ನಾಗರಾಜ ನಾಯ್ಕ, ಗಿರೀಶ್ ಶೆಟ್ಟಿ, ಹೀನಾ ಶೇಖ್ ನೇತ್ರಾವತಿ ನಾಯ್ಕ ಉಪಸ್ಥಿತರಿದ್ದರು.