• first
  second
  third
  previous arrow
  next arrow
 • ಕನ್ನಡದಲ್ಲಿ ಶೇ.100 ಪಡೆದ ವಿದ್ಯಾರ್ಥಿಗಳಿಗೆ ಕಸಾಪದಿಂದ ಸನ್ಮಾನ

  300x250 AD

  ದಾಂಡೇಲಿ: ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಎಲ್ಲ ಮಾಧ್ಯಮಗಳನ್ನೂ ಒಳಗೊಂಡು ಕನ್ನಡ ಭಾಷಾ ವಿಷಯದಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಅಂಕ ಪಡೆದ ಎಲ್ಲ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನಾ ಪತ್ರ ನೀಡಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ತಿಳಿಸಿದ್ದಾರೆ.

  ಕಾರವಾರ ಶೈಕ್ಷಣಿಕ ಜಿಲ್ಲೆ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಇಡೀ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯೊಂದರಲ್ಲೇ ನೂರಕ್ಕೆ ನೂರರಷ್ಟು ಅಂಕ ಪಡೆದವರ ಸಂಖ್ಯೆ ಸುಮಾರು 900ರಷ್ಟು ಆಗುತ್ತಿದೆ. ಈ ಎಲ್ಲ ವಿದ್ಯಾರ್ಥಿಗಳನ್ನು ಒಂದೇ ಕಾರ್ಯಕ್ರಮದಲ್ಲಿ ಗೌರವಿಸುವುದು ಕಷ್ಟಸಾಧ್ಯವಾಗಿರುವುದರಿಂದ ಜಿಲ್ಲೆಯ 12 ತಾಲ್ಲೂಕುಗಳಲ್ಲಿಯೂ ಕೂಡ ಕಸಾಪದಿಂದ ಕಾರ್ಯಕ್ರಮಗಳನ್ನು ಸಂಘಟಿಸಿ ಆಯಾಯ ತಾಲ್ಲೂಕಿನಲ್ಲೇ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ ಎಂದರು.

  ಇಂಗ್ಲಿಷ್ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆಯುವುದು ಕೂಡ ವಿಶೇಷ ಮತ್ತು ಸಾಧನೆಯಾಗಿರುವುದರಿಂದ ಕನ್ನಡ ಮಾಧ್ಯಮದಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರರಷ್ಟು ಅಂಕ ಪಡೆದವರ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದವರನ್ನೂ ಕೂಡ ಗೌರವಿಸಲಾಗುತ್ತದೆ. ಜೊತೆಗೆ ಉರ್ದು ಹಾಗೂ ಇತರೆ ಮಾಧ್ಯಮದವರು ಕೂಡ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದರೆ ಅವರನ್ನು ಕೂಡ ಸನ್ಮಾನಿಸಲಾಗುತ್ತದೆ ಎಂದರು.

  300x250 AD

  ಜಿಲ್ಲೆಯೊಂದರಲ್ಲೇ ಇಷ್ಟೊಂದು (900ರಷ್ಟು) ಸಂಖ್ಯೆಯಲ್ಲಿ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರರಷ್ಟು ಅಂಕ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಈ ಎಲ್ಲ ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸಿರುವ ವಾಸರೆಯವರು ಆಯಾ ತಾಲ್ಲೂಕು ಗಳಲ್ಲಿರುವ ಕನ್ನಡದಲ್ಲಿ ನೂರಕ್ಕೆ ನೂರರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ಆಯಾ ತಾಲೂಕಿನ ಕಸಪಾ ಅಧ್ಯಕ್ಷರನ್ನು ಸಂಪರ್ಕಿಸಿ ತಮ್ಮ ಮಾಹಿತಿ ನೀಡಬಹುದಾಗಿದೆ. ತಾಲೂಕುವಾರು ಕಸಾಪ ಅಧ್ಯಕ್ಷರುಗಳೂ ಕೂಡಾ ತಮ್ಮನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಾರೆ ಎಂದು ವಾಸರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  Share This
  300x250 AD
  300x250 AD
  300x250 AD
  Back to top