ಶಿರಸಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿಯು ನಗರದ ಪಂಡಿತ್ ದೀನದಯಾಳ್ ಉಪಧ್ಯಾಯ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ನಾಯ್ಕ್ ಜಾಲಿ ವಹಿಸಿದ್ದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಜಿಲ್ಲಾ ಹಿಂದುಳಿದ ವರ್ಗದ ಉಸ್ತುವಾರಿ ಸತೀಶ್ ಶೇಜವಾಡಕರ್ ಕಾರ್ಯಕ್ರಮ ಉದ್ಘಾಟಿಸಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ್ ಅಂಕೋಲಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಶಾಂತ್ ನಾಯ್ಕ್, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಗಣಪತಿ ನಾಯ್ಕ್, ಚಂದ್ರಶೇಖರ ನಾಯ್ಕ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಹಾದಿಮನಿ, ಒಬಿಸಿ ಮೊರ್ಚಾ ಶಿರಸಿ ಗ್ರಾಮೀಣ ಘಟಕದ ಅಧ್ಯಕ್ಷ ಸತೀಶ್ ನಾಯ್ಕ್ ಔಢಾಳ ಮತ್ತು ಜಿಲ್ಲಾ ಒಬಿಸಿ ಮೋರ್ಚಾ ಸದಸ್ಯರು, ಜಿಲ್ಲಾ ಸಂಚಾಲಕರು, ವಿವಿಧ ಮಂಡಲದ ಅಧ್ಯಕರುಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಉಪಸ್ಥಿರಿದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಹಾದಿಮನಿ ಸ್ವಾಗತಿಸಿದರು. ಗಣಪತಿ ನಾಯ್ಕ್ ಹೊನ್ನಾವರ ವಂದನಾರ್ಪಣೆ ಮಾಡಿದರು. ಸತೀಶ್ ನಾಯ್ಕ್ ಔಢಾಳ ಕಾರ್ಯಕ್ರಮದ ನಿರ್ವಹಣೆ ಮಾಡಿದರು.