• Slide
  Slide
  Slide
  previous arrow
  next arrow
 • ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ: ಸಕಲ ಸಿದ್ಧತೆಗಾಗಿ ಜಿಲ್ಲಾಧಿಕಾರಿ ಕರೆ

  300x250 AD

  ಕಾರವಾರ: ಜಿಲ್ಲೆಯ ಕಾರವಾರ, ಅಂಕೋಲಾ, ಹಾಗೂ ಸಿದ್ದಾಪುರ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿರುವ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ವಿನೂತನ ರೀತಿಯಲ್ಲಿ ಆಚರಿಸಲು ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು.

  ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜರುಗಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸ್ವಾತಂತ್ರ್ಯೋತ್ಸವದ ಸವಿನೆನಪನ್ನು ಮೆಲುಕುಹಾಕುವ ಸದುದ್ದೇಶದಿಂದ ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯನ್ನು ಸ್ಮರಿಸುವ ಕಾರ್ಯಕ್ರಮವಾಗಿರುವುದರಿಂದ ಪ್ರತಿಯೊಂದು ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಬಹಳ ಆಸಕ್ತಿಯಿಂದ ಅರ್ಪಣಾ ಮನೋಭಾವನೆಯಿಂದ ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕೆಂದು ಹೇಳಿದರು.

  ಅಮೃತ ಮಹೋತ್ಸವ ಆಚರಣೆ ನಿಮಿತ್ಯ ಜೂ.25ರಂದು ಆಯ್ದ ಸ್ಥಳಗಳಲ್ಲಿ ಶಿಲಾಫಲಕ ನೆಡುವುದು, ಜು.15ರಂದು 15 ಸ್ಥಳಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕರ್ಮಭೂಮಿಯಲ್ಲಿ ಒಂದುದಿನ ಎಂಬ ಕಾರ್ಯಕ್ರಮ, ಆ.1ರಿಂದ 8ರವರೆಗೆ ರಥಯಾತ್ರೆ ಹಾಗೂ ಆ.9ರಂದು ನಡೆಯಲಿರುವ ಸಮಾರೋಪ ಕಾರ್ಯಕ್ರಮದವರೆಗೂ ಅಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು. ಆ ಮೂಲಕ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಯಶಸ್ವಿಗೊಳ್ಳಲು ಕೈಜೋಡಿಸಬೇಕು ಎಂದು ಹೇಳಿದರು.

  300x250 AD

  ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್., ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನರೇಂದ್ರ ನಾಯಕ್ ಹಾಗೂ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಇದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top