ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 63ರ ಸುಂಕಸಾಳ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ಸುಂಕಸಾಳ ಬಳಿ ಅಕ್ರಮ ಮರಳುಗಾರಿಕೆ ಹಾಗೂ ಸಾಗಾಟ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಟಿಪ್ಪರಿನಲ್ಲಿ ಅಕ್ರಮವಾಗಿ ಮರಳನ್ನು ತುಂಬಿಕೊAಡು ಹೋಗುತ್ತಿದ್ದ ವೇಳೆ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಂತರ ಮರಳು ತುಂಬಿದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಈ ಕಾರ್ಯಾಚರಣೆ ಸಿಪಿಐ ಸಂತೋಶ್ ಶೆಟ್ಟಿ ಮಾರ್ಗದರ್ಶನದಲ್ಲಿ ಪಿಎಸೈ ಮಹಾಂತೇಶ್ ಬಿ.ವಿ. ನೇತೃತ್ವದಲ್ಲಿ ನಡೆದಿದ್ದು, ಸಿಬ್ಬಂದಿ ಶೇಖರ್ ಸಿದ್ದಿ ಮತ್ತು ಸುಬ್ರಾಯ್ ಭಟ್ ಇದ್ದರು.