ಯಲ್ಲಾಪುರ: ತಾಲೂಕಿನ ಮದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲಗೋಡ ಗ್ರಾಮದ ಶ್ರೀ ಕರಿಯವ್ವ ದೇವಿ ದೇವಾಲಯದ ಆವರಣದಲ್ಲಿ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಕಾರ್ಯಕರ್ತರ ಸಭೆ ನಡೆಸಿದರು.
ಮದನೂರ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿದ ಸಚಿವರು, ಗ್ರಾಮದ ಅಭಿವೃದ್ಧಿ ಯೋಜನೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಯುವ ನಾಯಕರಾದ ವಿವೇಕ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ , ಪ್ರಸಾದ ಹೆಗಡೆ, ಪ್ರಮುಖರಾದ ವಿಜಯ ಮಿರಾಶಿ, ಗಣಪತಿ ಮುದ್ದೇಪಾಲ್, ಮುರಳಿ ಹೆಗಡೆ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.