ಜೊಯಿಡಾ: ತಾಲೂಕಿನ ಅನಮೋಡ ಜಳಕಟ್ಟಿ ಬಳಿ ಸಾರಿಗೆ ಬಸ್ಸೊಂದು ಆಯತಪ್ಪಿ ಸೇತುವೆಯ ಕಂಬವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐದಾರು ಜನರಿಗೆ ಗಂಭೀರ ಗಾಯವಾದ ಘಟನೆ ಸೋಮವಾರ ನಡೆದಿದೆ.
ಹುಬ್ಬಳ್ಳಿಯಿಂದ ವಾಸ್ಕೋ ಕಡೆಗೆ ಸಾಗುತ್ತಿದ್ದ ಬಸ್ ಮುಂದಿನಿಂದ ಬರುತ್ತಿದ್ದ ವಾಹನಕ್ಕೆ ಜಾಗ ಬಿಡಲು ಹೋಗಿ ಆಯತಪ್ಪಿ ಸೇತುವೆಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.