• Slide
  Slide
  Slide
  previous arrow
  next arrow
 • ಕಾರ್ಯನಿರತ ಪತ್ರಕರ್ತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

  300x250 AD

  ಯಲ್ಲಾಪುರ: ಇಲ್ಲಿನ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಟ್ಟಣದ ನೌಕರರ ಭವನದಲ್ಲಿ ನಡೆಯಿತು.
  ಮುಂದಿನ ಮೂರು ವರ್ಷಗಳ ಅವಧಿಗೆ ಸಂಘದ ಅಧ್ಯಕ್ಷರಾಗಿ ಕೆ.ಎಸ್.ಭಟ್ಟ ಆನಗೋಡ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಿ.ಎನ್.ಭಟ್ಟ ತಟ್ಟಿಗದ್ದೆ, ಕಾರ್ಯದರ್ಶಿಯಾಗಿ ಶ್ರೀಧರ ಅಣಲಗಾರ ಅವಿರೋಧವಾಗಿ ಆಯ್ಕೆಯಾದರು. ಖಜಾಂಚಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದತ್ತಾತ್ರೇಯ ಭಟ್ಟ ಕಣ್ಣಿಪಾಲ ಆಯ್ಕೆಯಾದರು.
  ಹಿರಿಯ ಪತ್ರಕರ್ತ ಬೀರಣ್ಣ ನಾಯಕ ಮೊಗಟಾ ಚುನಾವಣಾಧಿಕಾರಿಯಾಗಿ ಪಾಲ್ಗೊಂಡು, ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ಜಿಲ್ಲೆಯಲ್ಲಿ ಯಲ್ಲಾಪುರದ ಪತ್ರಕರ್ತರು ವಿಶೇಷ ಮಾನ್ಯತೆ, ಗೌರವ ಹೊಂದಿದ್ದಾರೆ. ಸಂಘಟನೆ ಆ ಗೌರವ ಕಾಯ್ದುಕೊಂಡು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದರು.
  ಜಿಲ್ಲಾ ಸಂಘದ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಪ್ರಭಾವತಿ ಗೋವಿ, ತಾಲೂಕು ಸಂಘದ ಸದಸ್ಯರಾದ ಸುಬ್ರಾಯ ಬಿದ್ರೆಮನೆ, ಜಯರಾಜ ಗೋವಿ ಇತರರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top