ಕುಮಟಾ: ಎಲ್ಲಾ ಕಂಪನಿಯ ಮೊಬೈಲ್‌ಗಳ ಹಾರ್ಡ್ ವೇರ್ ಹಾಗೂ ಸಾಫ್ಟ್ ವೇರ್ ರಿಪೇರಿ ತರಬೇತಿಯು ಇಲ್ಲಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜೂ.17ರಿಂದ ಜುಲೈ 16ರವರೆಗೆ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ- ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45 ವರ್ಷಗಳು. ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು, ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನನವಿರಬೇಕು. ಈ ತರಬೇತಿಯ ಜೊತೆಗೆ ವ್ಯಕ್ತಿತ್ವ ವಿಕಸನ, ಬ್ಯಾಂಕಿಂಗ್, ಮಾರ್ಕೆಟಿಂಗ್ ಹೀಗೆ ಮುಂತಾದ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತರು ಸಂಪರ್ಕಿಸಬೇಕಾದ ವಿಳಾಸ: ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ -581343 ಉತ್ತರಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 94498 60007, 95382 81989, 99167 83825, 88804 44612, 96209 62004ಗೆ ಸಂಪರ್ಕಿಸಬಹುದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್‌ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಪಾನ್‌ಕಾರ್ಡ್ ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.