ಕಾರವಾರ: ಜಿಲ್ಲಾ ಪೊಲೀಸ್ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆ ಹಾಗೂ ಬಾಡ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ವಸ್ತು ಸೇವನೆ ವಿರೋಧಿ ದಿನವನ್ನು ಆಚರಿಸಲಾಯಿತು.
ಸೈಬರ್ ಅಪರಾಧಗಳ ಮಾಹಿತಿ ತಜ್ಞ ಶಶಿಧರ್ ಪಟಗಾರ ಇಂದಿನ ದಿನಗಳಲ್ಲಿ ಅಂತರ್ಜಾಲದ ಮೂಲಕ ನಡೆಯುವ ಸೈಬರ್ ಅಪರಾಧಗಳ ಬಗ್ಗೆ ತಮ್ಮ ಉಪನ್ಯಾಸದಲ್ಲಿ ಮಾಹಿತಿ ನೀಡಿದರು. ಮೊಬೈಲ್ ಬಳಕೆ ಮಾಡುವಾಗ ಅನುಸರಿಸಬೇಕಾದ ಜಾಗೃತಿ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರವಾರ ಸೈಬರ್ ಅಪರಾಧ ಠಾಣೆಯ ವೃತ್ತ ನಿರೀಕ್ಷಕ ನಿತ್ಯಾನಂದ ಪಂಡಿತ ಮಾತನಾಡಿ, ಮಿತಿಮೀರಿ ಬೆಳೆಯುತ್ತಿರುವ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಇಲಾಖೆಯ ಜೊತೆ ಕೈಜೋಡಿಸಬೇಕೆಂದು ತಿಳಿಸಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಶಿವಾನಂದ ವಿ.ನಾಯಕ ಅಧ್ಯಕ್ಷತೆ ವಹಿಸಿದ್ದರು. ಆರಂಭದಲ್ಲಿ ಪ್ರಶಿಕ್ಷಣಾರ್ಥಿ ದೀಕ್ಷಿತಾ ನಾಯ್ಕ ಪ್ರಾರ್ಥಿಸಿದರು. ಶಿಕ್ಷಕ ವಿದ್ಯಾರ್ಥಿ ಜಿವಲಪ್ಪಾ ಸ್ವಾಗತಿಸಿದರು ಹಾಗೂ ಭಾಗ್ಯಶ್ರೀ ನಾಯ್ಕ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.