ಸಿದ್ದಾಪುರ: ಬನ್ನಿ ಪುನಃ ಶಾಲೆಗೆ ಹೋಗೋಣ ಎಂಬ ಅಭಿಯಾನದ ಹಿನ್ನಲೆಯಲ್ಲಿ ತಾಲೂಕಿನ ಬಿದ್ರಕಾನಿನ ಎಂ.ಜಿ.ಸಿ.ಎಂ. ಪ್ರೌಢಶಾಲೆಯ 71 ವಿದ್ಯಾರ್ಥಿಗಳಿಗೆ ತಮ್ಮ ಶ್ರೀ ಸಂಸ್ಥೆಯ ಮೂಲಕ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ಇತ್ತಿಚೆಗೆ ಸಾಮಾಜಿಕ ಕಾರ್ಯಕರ್ತ ಅಮೋದ್ ಸಿರ್ಸಿಕರ್ ವಿತರಿಸಿದರು.
ಬನ್ನಿ ಪುನಃ ಶಾಲೆಗೆ ಹೋಗೋಣ ಎಂಬ ಅಭಿಯಾನದಡಿಯಲ್ಲಿ ಶಿರಸಿಯ ಅಮೋದ ಶಿರಸಿಕರ್ ಜಿಲ್ಲೆಯ ಹಲವು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸುವ ಜನಸ್ನೇಹಿ ಕೆಲಸವನ್ನು ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆಸಕ್ತಿಯಿಂದ ಶಾಲೆಗೆ ಬಂದು, ಉತ್ತಮವಾದ ಶಿಕ್ಷಣವನ್ನು ಪಡೆದು ಒಳ್ಳೆಯ ಜೀವನವನ್ನು ನಡೆಸಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಎಸ್. ಎಸ್. ಪಮ್ಮಾರ ಮಾತನಾಡಿ, ವಿದ್ಯಾರ್ಥಿಗಳು ದಾನಿಗಳು ನೀಡಿದ ವಸ್ತುಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಕಲಿಕೆಯಲ್ಲಿ ಪ್ರಗತಿ ಸಾಧಿಸುವಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.