Slide
Slide
Slide
previous arrow
next arrow

ನ್ಯಾಷನಲ್ ಹೆರಾಲ್ಡ್ ಅಕ್ರಮ ಆರೋಪ: ಸತತ 3ನೇ ದಿನ ರಾಹುಲ್ ಗಾಂಧಿ ವಿಚಾರಣೆ

300x250 AD

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಸತತ ಮೂರನೇ ದಿನ ಅವರ ವಿಚಾರಣೆ ನಡೆಯುತ್ತಿದೆ.

ಇನ್ನೊಂದೆಡೆ ರಾಹುಲ್ ಅವರ ವಿಚಾರಣೆಯನ್ನು ವಿರೋಧಿಸಿ ದೆಹಲಿಯ ಐಸಿಸಿ ಕಚೇರಿಯೆದುರು ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸೋಮವಾರ ಸುಮಾರು 10 ಗಂಟೆಗಳ ಕಾಲ ರಾಹುಲ್ ಅವರನ್ನು ವಿಚಾರಣೆ ನಡೆಸಲಾಗಿದೆ. ಮಂಗಳವಾರ ರಾಹುಲ್ ಅವರು ನೀಡಿದ್ದ ಹೇಳಿಕೆಯ ಲಿಖಿತ ಪ್ರತಿಯನ್ನು ನೀಡಲಾಗಿದೆ. ಇದನ್ನು ಕೂಲಂಕುಶವಾಗಿ ಪರಿಶೀಲಿಸಿ  ಸಹಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

300x250 AD

ನ್ಯಾಷನಲ್‌ ಹೆರಾಲ್ಡ್‌  ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಇಡಿ ಸಮನ್ಸ್‌ ಜಾರಿಗೊಳಿಸಿದೆ. ಆದರೆ ಅನಾರೋಗ್ಯದ ಕಾರಣ ನೀಡಿ ಅವರು ವಿಚಾರಣೆ ತಪ್ಪಿಸಿಕೊಂಡಿದ್ದಾರೆ.

ಕೃಪೆ: news13.in

Share This
300x250 AD
300x250 AD
300x250 AD
Back to top