ಹೊನ್ನಾವರ: ತಾಲ್ಲೂಕಿನ ಬರಗದ್ದೆಯ ಪುರಾಣ ಪ್ರಸಿದ್ಧ ನಾಗದೇವತಾ ಸಮೂಹ ಚೌಡೇಶ್ವರಿ, ಜಟಗೇಶ್ವರ ಶಕ್ತಿ ದೇವರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನದಂತೆ ಜರುಗಿತು.
ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ತಾಲೂಕಿನ ವಿವಿಧಡೆಯಿಂದ ಭಕ್ತರು ಆಗಮಿಸಿದ್ದರು. ಮಾಜಿ ಶಾಸಕ ಮಂಕಾಳ ವೈದ್ಯ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ದೇವರ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ 30,000 ಹಣವನ್ನು ದೇಣಿಗೆಯಾಗಿ ನೀಡಿದರು. ಇದೇ ವೇಳೆ ದೇವಸ್ಥಾನದ ಆಡಳಿತ ಕಮಿಟಿಯವರು ಅವರನ್ನು ಸನ್ಮಾನಿಸಿ ಗೌರವಿಸಿದರು.