ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯ ಹಣಕೋಣ, ಕಡವಾಡ ಮತ್ತು ದೇವಳಮಕ್ಕಿ ಗ್ರಾಮದಲ್ಲಿ ಜೂ.18ರಂದು ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಅನ್ನು ಆಯೋಜಿಸಲಾಗಿದೆ.
ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ಕುಂದು ಕೊರತೆಗಳ ಅಹವಾಲನ್ನು ನೀಡಬಹುದು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.