ಕಾರವಾರ: ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಗಳಿಸಿದ್ದು, ಸತತ 8ನೇ ಬಾರಿಗೆ ದಾಖಲೆಯ ಗೆಲುವು ಸಾಧಿಸಿದ್ದು ಸಂತಸ ತಂದಿದೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.
ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತ, ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಹಗಲಿರುಳು ತೊಡಗಿಕೊಂಡಿರುವ ಬಸವರಾಜ ಹೊರಟ್ಟಿ ಅವರದ್ದು ಅರ್ಹ ಗೆಲುವು. ಅವರ ಗೆಲುವಿನಿಂದ ನಮ್ಮ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ, ವಿಶೇಷವಾಗಿ ಶಿಕ್ಷಕರು, ನಮ್ಮ ಕ್ಷೇತ್ರ ಹಾಗೂ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಅವರ ಆಯ್ಕೆಗೆ ಕಾರಣರಾದ ನನ್ನ ಕ್ಷೇತ್ರದ ಎಲ್ಲ ಶಿಕ್ಷಕ, ಶಿಕ್ಷಕಿಯರು, ಶ್ರಮಿಸಿದ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.