ಯಲ್ಲಾಪುರ: ತಾಲ್ಲೂಕಿನ ಹುತ್ಕಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಧಾತ್ರೀ ಫೌಂಡೇಶನ್ ವತಿಯಿಂದ ನೀಡಲಾದ ‘ನಲಿ- ಕಲಿ’ ಕೊಠಡಿಯನ್ನು ಧಾತ್ರಿ ಫೌಂಡೇಶನ್ ಅಧ್ಯಕ್ಷ, ಉದ್ಯಮಿ ಶ್ರೀನಿವಾಸ ಭಟ್ ಧಾತ್ರಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಚಿಕ್ಕಂದಿನಿಂದಲೇ ಶಿಕ್ಷಣದೆಡೆಗೆ ಆಸಕ್ತಿ ಬೆಳೆಸಬೇಕು. ಆ ಮೂಲಕ ಅವರನ್ನು ಸಮಾಜಕ್ಕೆ, ದೇಶಕ್ಕೆ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು. ಮಕ್ಕಳಿಗೆ ಸರಿಯಾದ ಸಮಯದಲ್ಲಿ ಉತ್ತಮ ಸಂಸ್ಕಾರ ನೀಡುವುದರ ಜೊತೆಗೆ ಅವರಲ್ಲಿಬಾಡಗಿರುವ ಸುಪ್ತ ಪ್ರತಿಭೆಗಳನ್ನು ಪೋಷಿಸುವ ಕಾರ್ಯ ಎಲ್ಲರಿಂದಾಗಬೇಕಿದೆ ಎಂದರು.
ಧಾತ್ರಿ ಫೌಂಡೇಶನ್ ಮೂಲಕ ಜಿಲ್ಲೆಯ ಯಲ್ಲಾಪುರ-ಮುಂಡಗೋಡು-ಬನವಾಸಿ ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳ ಅಗತ್ಯತೆಗಳನ್ನು ನಿವಾರಿಸುವಲ್ಲಿ ಹೆಜ್ಜೆಯನ್ನಿಟ್ಟಿರುವ ಶ್ರೀನಿವಾಸ್ ಭಟ್ ಧಾತ್ರಿ ಅವರ ಸಾಮಾಜಿಕ ಕಾರ್ಯವನ್ನು ಸ್ಥಳೀಯರು ಶ್ಲಾಘಿಸಿ, ಸನ್ಮಾನಿಸಿದರು.
ಈ ಸಂದರ್ಭ ದಲ್ಲಿ ಪಂಚಾಯಿತಿಯ ಅಧ್ಯಕ್ಷರು, ಊರ ಹಿರಿಯರು, ಶಾಲಾ ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.