
ಹಂಗೇರಿ: ಬುಡಾಪೆಸ್ಟ್ ನಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಛಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಪ್ರಿಯಾ ಮಲಿಕ್ ಪ್ರಥಮ ಸ್ಥಾನ ಗಳಿಸುವ ಮೂಲಕ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಛಾಂಪಿಯನ್ ಶಿಪ್ ನಲ್ಲಿ ಮಹಿಳೆಯರ 73ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಸ್ಪರ್ಧಿಸಿ ಚಿನ್ನದ ಪದಕವನ್ನು ಗೆದ್ದಿದ್ದು ದೇಶದ ಕೀರ್ತಿಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ದಿದ್ದಾರೆ.