• Slide
    Slide
    Slide
    previous arrow
    next arrow
  • ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು: ಶಿವರಾಮ ಹೆಬ್ಬಾರ್

    300x250 AD

    ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಗುರುವಾರ ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.
    ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ( Pilot Training ) ನೀಡಲಾಗುವುದು, ಮಂಡಳಿಯೇ ಈ ತರಬೇತಿಯ ಸಂಪೂರ್ಣ ವೆಚ್ಚವನ್ನು ಭರಿಸಲಿದೆ ಎಂದರು.
    ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ 600 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯದ 2500 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶೈಕ್ಷಣಿಕ ಪ್ರೋತ್ಸಾಹ ಧನದ ಜೊತೆಯಲ್ಲಿ 10 ಸಾವಿರ ರೂಪಾಯಿ ವಿಶೇಷ ಪ್ರೋತ್ಸಾಹ ಧನ ಮತ್ತು ಅಭಿನಂದನಾ ಪತ್ರವನ್ನು ನೀಡಲಾಗುವುದು ಎಂದು ಸಭೆಯಲ್ಲಿ ಘೋಷಿಸಿದರು.

    ಈ ಸಭೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯ ನಿರ್ವಾಹಣಾಕಾರಿ ಗುರುಪ್ರಸಾದ ಎಮ್.ಪಿ, ಹಾಗೂ ಮಂಡಳಿಯ ಕಾರ್ಯದರ್ಶಿ ಮನೋಜ ಜೈನ್ ಹಾಗೂ ಮಂಡಳಿಯ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top