ಹೊನ್ನಾವರ: ಬಿಜೆಪಿ ಯುವಮೋರ್ಚಾ ತಾಲೂಕು ಘಟಕದ ವತಿಯಿಂದ ವಿಕಾಸ ತೀರ್ಥ ಎನ್ನುವ ಘೋಷ ವಾಕ್ಯದೊಂದಿಗೆ ಬೈಕ್ ಜಾಥಾ ಜೂನ್ 18ರಂದು ಮುಂಜಾನೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶ್ವಸಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರದ ಸಾಧನೆಯ ಕುರಿತು ಜನರಲ್ಲಿ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಅಂದು ಮುಂಜಾನೆ 9.30ಕ್ಕೆ ಪಟ್ಟಣದ ಶರಾವತಿ ವೃತ್ತದಿಂದ ನಡೆಯುವ ಕಾರ್ಯಕ್ರಮದಲ್ಲಿ ಶಾಸಕರಾದ ದಿನಕರ ಶೆಟ್ಟಿ ಮತ್ತು ಸುನೀಲ್ ಬಿ.ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಮಂಡಲ ಅಧ್ಯಕ್ಷ ರಾಜೇಶ್ ಭಂಡಾರಿ ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರುಗಳು, ಯುವಮೋರ್ಚಾ ಘಟಕದವರು ಹಾಗೂ ಸಾರ್ವಜನಿಕರು ಪಾಲ್ಗೊಳುವಂತೆ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಚಿನ ಶೇಟ್ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.