ಶಿರಸಿ: ನಗರದ ಧಾನ್ ಫೌಂಡೇಶನ್ ಮತ್ತು ಶ್ರೀ ಸೂರ್ಯನಾರಾಯಣ ವಿದ್ಯಾಸಂಸ್ಥೆ ಬಿಸಲಕೊಪ್ಪಇವರ ಸಂಯುಕ್ತಾಶ್ರಯದಲ್ಲಿ,
‘ಮಣ್ಣೇ ಹೊನ್ನು, ಮಣ್ಣು ಮತ್ತು ನೀರಿನ ಸಂರಕ್ಷಣೆ’ ಎನ್ನುವ ಜಾಗೃತಿ ಕಾರ್ಯಕ್ರಮವನ್ನು ಜೂ.17 ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಬನವಾಸಿಯ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಉಷಾ ಆರ್. ಕಬ್ಬೇರ್,ಬಿಸಲಕೊಪ್ಪ ಗ್ರಾಂ.ಪಂ. ಅಧ್ಯಕ್ಷ ರಾಘವೇಂದ್ರ ನಾಯ್ಕ , ಬಿಸಲಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ನರೇಂದ್ರ ಶಾಸ್ತ್ರೀ ಇವರುಗಳು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ನಂತರ ಧಾನ್ ಫೌಂಡೇಶನ್ ಸಂಸ್ಥೆಯ ಸಮನ್ವಯಾಧಿಕಾರಿಗಳಾದ ಗಜಾನನ ಹೆಗಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಅತಿಥಿಗಳು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ನೀರು ಮತ್ತು ಮಣ್ಣಿನ ಸಂರಕ್ಷಣೆಯ ಭಾಗವಾಗಿ ರೈತರಿಗೆ ವಯಕ್ತಿಕ ಸಹಾಯ ಧನವನ್ನು ಚೆಕ್ ಮೂಲಕ ವಿತರಣೆ ಮಾಡಲಾಯಿತಲ್ಲದೇ ಧಾನ್ ಫೌಂಡೇಶನ್ ಸಂಸ್ಥೆಯು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ರೈತರಿಗೆ 4000ಕ್ಕೂ ಅಧಿಕ ಗಿಡಗಳನ್ನು ನೀಡಿ ಜನರಲ್ಲಿ ಜಾಗೃತಿ ಮೂಡಿಸಿರುವುದು ಅತ್ಯಂತ ಪ್ರಶಂಸನೀಯ ಕಾರ್ಯವಾಗಿದೆ. ಕಾರ್ಯಕ್ರಮದಲ್ಲಿ ಗ್ರಾಂ.ಪಂ. ಬಿಸಲಕೊಪ್ಪ ಸದಸ್ಯರು, ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಗಣೇಶ ಭಟ್, ವಿದ್ಯಾಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಹಾಗೂ ರೈತ ಬಾಂಧವರು ಭಾಗವಹಿಸಿದ್ದರು.