ಶಿರಸಿ: ಯೋಗ ಜಾಗೃತಿ ಕಾರ್ಯದಲ್ಲಿ ನಿರಂತರ ತೊಡಗಿಕೊಂಡಿರುವ ಉತ್ತರ ಕನ್ನಡ ಯೋಗ ಫೆಡರೇಶನ್ ಶಿರಸಿ, ಇವರು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ “ಮಾನವೀಯತೆಗಾಗಿ ಯೋಗ” ಧ್ಯೇಯವಾಕ್ಯದೊಂದಿಗೆ 8ನೇಯ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಜೂ.20 ರಂದು ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ ವಿದ್ಯಾರ್ಥಿಗಳಿಗೆ ಯೋಗ ಶಿಬಿರ ಹಮ್ಮಿಕೊಂಡಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಖ್ಯಾತ ಆಯುರ್ವೇದ ತಜ್ಞರಾದ ಡಾ, ಮಮತಾ ಭಾಗ್ವತ್ ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಆಯುರ್ವೇದ ಹಾಗೂ ಯೋಗದ ಕುರಿತು ಪವರ್ ಪಾಯಿಂಟ್ ಮೂಲಕ ವಿವರಿಸಿದರು. ಜೀವನದಲ್ಲಿ ಯೋಗ ಮಾಡುವದರಿಂದ ದೈಹಿಕ ಮತ್ತು ಮಾನಸಿಕ ಕ್ಷಮತೆ ಜಾಸ್ತಿ ಆಗುತ್ತದೆ ಎಂಬುದನ್ನು ಹಲವಾರು ಉದಾಹರಣೆಗಳ ಮೂಲಕ ವಿವರಿಸಿದರು.ಶ್ರೀಕಾಂತ ಹೆಗಡೆ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಅನಿತಾ ಹೆಗಡೆ ಶಿಕ್ಷಕರು ಉಪಸ್ಥಿತರಿದ್ದರು.