ಶಿರಸಿ: ತಾಲೂಕು ಕಾನೂನು ಸೇವಾ ಸಮಿತಿ , ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.21 ರಂದು ವಕೀಲರ ಸಭಾಭವನ ಶಿರಸಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು . ಕಾರ್ಯಕ್ರಮವನ್ನು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಗದೀಶ ವಿ. ತಾಲೂಕು ಕಾನೂನು ಸೇವಾ ಸಮಿತಿ ಶಿರಸಿ ಅಧ್ಯಕ್ಷ ಕಮಲಾಕ್ಷ ಡಿ. ಹಾಗೂ ಸೀನಿಯರ್ ಸಿವಿಲ್ ಜಡ್ಜ್,1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಜು ಶೇಡಬಾಳಕರ ಮತ್ತು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಅಭಿಷೇಕ ರಾಮಚಂದ್ರ ಜೋಶಿ ಹಾಗೂ ಜಿ. ಎನ್. ಹೆಗಡೆರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಗ ಕಾರ್ಯಕ್ರಮದಲ್ಲಿ ಎಲ್ಲಾ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ, ಶಿರಸಿಯ ಸಿಬ್ಬಂದಿಗಳು ಭಾಗವಹಿಸಿರುತ್ತಾರೆ. ಕಾರ್ಯಕ್ರಮದಲ್ಲಿ ಜಿ ಎನ್ ಹೆಗಡೆ ನ್ಯಾಯಾಧೀಶರಿಗೆ, ನ್ಯಾಯಾಲಯದ ಸಿಬ್ಬಂದಿಗಳಿಗೆ ಯೋಗಾಸನ ಹೇಳಿಕೊಡುವ ಮೂಲಕ ಕಾರ್ಯಕ್ರಮದಲ್ಲಿ ಮುಖ್ಯ ಪಾತ್ರವಹಿಸಿದರು.
ನ್ಯಾಯಾಂಗ ಇಲಾಖೆ ಸಿಬ್ಬಂದಿಗಳಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
