• first
  second
  third
  previous arrow
  next arrow
 • ಕನ್ನಡಕ್ಕೆ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

  300x250 AD

  ಶಿರಸಿ: ನಗರದ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಜಿಲ್ಲಾ‌ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಘಟಕ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭವು ಜೂ.22ರ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.
  ಶಿರಸಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ ಬಸವರಾಜ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬಿ.ಎನ್.ವಾಸರೆ ವಹಿಸಿಕೊಳ್ಳಲಿದ್ದಾರೆ. ಪ್ರಸ್ತಾವನೆಯನ್ನು ತಾಲೂಕು ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ವಹಿಸಲಿದ್ದು, ಆಶಯದ‌ ನುಡಿಯನ್ನು ಡಾ. ವೆಂಕಟೇಶ ನಾಯ್ಕ ಮಾತನಾಡಲಿದ್ದಾರೆ. ಪ್ರಶಂಸಾ ಪತ್ರವನ್ನು ಮಾರಿಕಾಂಬಾ ದೇವಸ್ಥಾನ ಅಧ್ಯಕ್ಷ ಆರ್.ಜಿ.ನಾಯ್ಕ ನೀಡಲಿದ್ದು, ಅತಿಥಿಗಳಾಗಿ ಬಿಇಓ ಎಂ.ಎಸ್.ಹೆಗಡೆ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಪಟಗಾರ, ಮಂಜುನಾಥ ಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  300x250 AD
  Share This
  300x250 AD
  300x250 AD
  300x250 AD
  Back to top