ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ 2022 ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಉತ್ತರಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿರುತ್ತದೆ .ಪ್ರಸ್ತುತ ಬೆಳೆ ಸಾಲ ಪಡೆಯದ ರೈತರು ಗ್ರಾಮಒನ್ ಕೇಂದ್ರಗಳ ಮೂಲಕ ವಿಮಾ ಕಂತನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ವಿಮಾ ನೊಂದಾವಣೆಗೆ ಜೂ.30 ಕೊನೆಯ ದಿನವಾಗಿರುತ್ತದೆ.ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕಾ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಮಾ ನೋಂದಣಿಗೆ ಜೂ.30 ಕೊನೆಯ ದಿನ
