
ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಇತ್ತೀಚೆಗೆ ದೈವಾಧೀನರಾದ ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧಿರಾಜ ಶ್ರೀಪಾದ ತೀರ್ಥ ವಡೇರ ಅವರಿಗೆ ಭಾನುವಾರ ಗೌರವ ನಮನ ಸಲ್ಲಿಸಲಾಯಿತು.
ಸಂಸ್ಥೆಯ ಆಡಳಿತ ಮಂಡಳಿಯ ವಿಶ್ವಸ್ಥರು ಹಾಗೂ ಎಲ್ಲ ಸಿಬ್ಬಂದಿಗಳು ಗುರುಗಳ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ, ಅಗಲಿದ ಮಹಾನ್ ಚೇತನಕ್ಕೆ ನುಡಿನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ವಿಠ್ಠಲ ನಾಯಕ, ಕಾರ್ಯದರ್ಶಿ ಮುರಳೀಧರ ಪ್ರಭು, ವಿಶ್ವಸ್ಥ ಡಿ.ಡಿ.ಕಾಮತ ಮುಖ್ಯಾಧ್ಯಾಪಕಿ ಸುಮಾ ಪ್ರಭು, ಜಯಾ ಶಾನಭಾಗ, ವಿನಯಾ ನಾಯಕ, ಶಿಕ್ಷಕ ಗಣೇಶ ಜೋಶಿ ಇವರುಗಳು ಗುರುಗಳನ್ನು ಸ್ಮರಿಸಿ, ಅವರ ವಿಶೇಷವಾದ ವ್ಯಕ್ತಿತ್ವದ ಕುರಿತು ಮಾತನಾಡಿದರು. ಉಪನ್ಯಾಸಕಿ ಗಾಯತ್ರಿ ಕಾಮತ ಗುರುಗಳ ಬಗ್ಗೆ ಕವನ ಬರೆದು ವಾಚಿಸಿದರು. ಉಪನ್ಯಾಸಕ ಪದ್ಮನಾಭ ಪ್ರಭು ಗುರುವಿನ ಕುರಿತಾದ ಭಜನೆ ಗೈದರು. ಸಂಗೀತ ಶಿಕ್ಷಕಿ ಲಕ್ಷ್ಮೀ ಹೆಗಡೆ ಪ್ರಾರ್ಥಿಸಿದರು. ಶಿಕ್ಷಕ ಚಿದಾನಂದ ಭಂಡಾರಿ ಕಾಗಾಲ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.
ಈ ಸಂದರ್ಭದಲ್ಲಿ ಜಂಟಿ ಕಾರ್ಯದರ್ಶಿ ಶೇಷಗಿರಿ ಶಾನಭಾಗ ವಿಸ್ವಸ್ಥರುಗಳಾದ ಅಶೋಕ ಪ್ರಭು, ದಾಸ ಆರ ಶಾನಭಾಗ, ಗಜಾನನ ಕಿಣಿ, ಸಲಹೆಗಾರ ಆರ್.ಎಚ್.ದೇಶಭಂಡಾರಿ, ವಿಧಾತ್ರಿ ಅಕಾಡೆಮಿಯ ಗುರುರಾಜ ಶೆಟ್ಟಿ, ಪ್ರಾಂಶುಪಾಲ ಮಹೇಶ ಉಪ್ಪೀನ, ಸುಜಾತಾ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.
ಸಂಪೂರ್ಣ ಕಾರ್ಯಕ್ರಮವನ್ನು ಅಂತರ್ಜಾಲ ಮಾಧ್ಯಮದ ಮೂಲಕ ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ವೀಕ್ಷಿಸಿದರು.