ಕಾರವಾರ; ಪ್ರಸಕ್ತ 2021-22 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಲ್ಲ ಮಾಧ್ಯಮದವರು ಸೇರಿದಂತೆ ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಕಾರವಾರ ತಾಲ್ಲೂಕು ಘಟಕ ಹಮ್ಮಿಕೊಂಡಿದೆ.
ಜೂನ್ 24ರಂದು ಪೂರ್ವಾಹ್ನ 10: 30ಗಂಟೆಗೆ ಕಾರವಾರದ ಹಿಂದೂ ಹೈಸ್ಕೂಲ್ ಸಭಾಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ಕಾರವಾರ ತಾಲ್ಲೂಕಿನ ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಹಾಗು ತೃತೀಯ ಭಾಷೆಯಾಗಿ ತೆಗೆದುಕೊಂಡ ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ಕಾರವಾರ ತಾಲ್ಲೂಕಿನ ಎಲ್ಲ ವಿದ್ಯಾರ್ಥಿಗಳನ್ನು ಪ್ರಶಂಸನಾ ಪತ್ರ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಗುವುದು, ಕಾರಣ ಕಾರವಾರ ತಾಲ್ಲೂಕಿನ ಎಲ್ಲ ಅರ್ಹ ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಬೇಕೆಂದು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಕನ್ನಡ ಭಾಷಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಹಕರಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ಕ.ಸಾ. ಪ.ಅಧ್ಯಕ್ಷ ರಾಮಾ ನಾಯ್ಕ-9448530685 ಗೌರವ ಕಾರ್ಯದರ್ಶಿಗಳು ಗಣೇಶ್, ಭೀಷಣ್ಣನವರ್ -94482209990 ಇವರನ್ನು ಸಂಪರ್ಕಿಸಬಹುದಾಗಿದೆ.
ಕನ್ನಡದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಸಾಪ ವತಿಯಿಂದ ಸನ್ಮಾನ
