ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಶ್ರೀಮಾರುತಿ ರೆಸಿಡೆನ್ಶಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳ ಸಹಯೋಗದೊಂದಿಗೆ ೮ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಧರ್ಮಾಧಿಕಾರಿ ಮಾರುತಿ ಗುರೂಜಿ ಸಾನಿಧ್ಯ ವಹಿಸಿದ್ದರು. ನಟ, ನಿರ್ದೇಶಕ, ನಿರೂಪಕ ಮಾಸ್ಟರ್ ಆನಂದ್ ಮಕ್ಕಳೊಂದಿಗೆ ಯೋಗಾಸನ ಮಾಡಿದರು. ಅಂತರರಾಷ್ಟ್ರೀಯ ನೃತ್ಯ ಕಲಾವಿದ ಹಾಗೂ ನೃತ್ಯ ಸಂಯೋಜಕ ರಾಘವೇಂದ್ರ ಸಿ.ಕೆ. ಮಕ್ಕಳಿಗೆ ನೃತ್ಯದ ಮೂಲಕ ಯೋಗ ಮಾಡಿಸಿದರು.
ಬಂಗಾರಮಕ್ಕಿಯಲ್ಲಿ ಯೋಗ ದಿನಾಚರಣೆ
