
ಯಲ್ಲಾಪುರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಜು.29 ಗುರುವಾರ ಬೆಳಿಗ್ಗೆ 11.45ಕ್ಕೆ ಯಲ್ಲಾಪುರಕ್ಕೆ ಆಗಮಿಸಲಿದ್ದಾರೆ.
ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಆಗಮಿಸುವ ಅವರು ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡುವರು. ಮತ್ತು ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವರು.
ನಂತರ ಕಾರವಾರ, ಅಂಕೋಲಾ ಕ್ಷೇತ್ರಗಳಲ್ಲಿ ಮಳೆ ಹಾನಿ ಸಮೀಕ್ಷೆ ನಡೆಸಿ, ಮಧ್ಯಾಹ್ನ ಅಂಕೋಲಾದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತಂತೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.