ಶಿರಸಿ:ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಹಲವು ವರ್ಷಗಳಿಂದ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಎಮ್.ಜಿ. ಹೆಗಡೆ ಸೇವೆಯಿಂದ ವಯೋ ನಿವೃತ್ತಿ ಹೊಂದುತ್ತಿದ್ದು, ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಬೀಳ್ಕೊಡುಗೆ ಸಮಾರಂಭವು ಜೂನ್.30 , ಗುರುವಾರದಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ಹಾಗೂ 2021-22ನೇ ಸಾಲಿನಲ್ಲಿಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವೂ ಜರುಗಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್ ಜಿ ಹೆಗಡೆ ಊರತೋಟ,ಎಮ್ ವಿ ಹೆಗಡೆ ಭತ್ತಗುತ್ತಿಗೆ,ವಿಶೇಷ ಆಹ್ವಾನಿತರಾಗಿ ಕೆ ಎನ್ ಹೊಸ್ಮನಿ,ಸಾರ್ವಜನಿಕ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಬಸವರಾಜ್,ಕ್ಷೇತ್ರ ಶಿಕ್ಷಣಾಧಿಕಾರಿಎಮ್‌ಎಸ್ ಹೆಗಡೆ ಇವರುಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಿದ್ಧಿವಿನಾಯಕ ವಿದ್ಯಾಪ್ರಸಾರ ಸಮಿತಿ ಗೋಳಿ ಇದರ ಅಧ್ಯಕ್ಷ ಎಮ್‌ಎಲ್ ಹೆಗಡೆ ಹಲಸಿಗೆ ವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.