• Slide
    Slide
    Slide
    previous arrow
    next arrow
  • ಜೂ.30ಕ್ಕೆ ಅರಣ್ಯ ಅಧಿಕಾರಿಗಳೊಂದಿಗೆ ಸಭೆ

    300x250 AD

    ಶಿರಸಿ: ಅರಣ್ಯ ಇಲಾಖೆಯ ಜಿಲ್ಲೆಯ ಹಿರಿಯ ಅಧಿಕಾರಿಗಳಾದ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಜೂ.30 ಗುರುವಾರ ಮುಂಜಾನೆ 10.30 ಕ್ಕೆ ಹೋರಾಟಗಾರರ ವೇದಿಕೆಯ ಸದಸ್ಯರೊಡಗೂಡಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಚರ್ಚಿಸುವ ಸಭೆ ನಿಗದಿಗೊಳಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇತ್ತೀಚಿಗೆ ನಿರಂತರ ಅರಣ್ಯ ಸಿಬ್ಬಂದಿಗಳಿಂದ ಅರಣ್ಯವಾಸಿಗಳ ಮೇಲೆ ಕಿರುಕುಳ, ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯ ಇಲಾಖೆ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಸಂಘಟಿಸಲಾಗಿದೆ. ಆಸಕ್ತ ಅರಣ್ಯವಾಸಿಗಳು ಆಗಮಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top