ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ‘ಪ್ರತಿಭಾ ದಿವಸ’ (ಟ್ಯಾಲೆಂಟ್ ಡೇ) ಆಚರಿಸಲಾಯಿತು.ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ವಿವಿಧ ಪ್ರತಿಭೆಯನ್ನು ವೇದಿಕೆಗೆ ಬಂದು ತೋರಿಸಿದರು. ಸಂಗೀತ, ನೃತ್ಯ, ಭಾಷಣ, ಸ್ಕೆಟ್ಟಿಂಗ್, ಕರಾಟೆ, ಕವನವಾಚನ ಮೊದಲಾದ ಕಲಾಪ್ರತಿಭೆಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಮಾತನಾಡಿ, ಇಂಥ ಕಾರ್ಯಕ್ರಮಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಲು ನಮ್ಮಿಂದ ಸಾಧ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮವಾದ ಪ್ರದರ್ಶನವನ್ನು ನೀಡಿದ್ದು, ಅವರನ್ನು ಪ್ರೋತ್ಸಾಹಿಸಿ, ಹುರಿದುಂಬಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಥೆರೇಸಾ ರೇಗೋ ಸ್ವಾಗತ ಕೋರಿದರು. ಸೀಮಾ ರೇವಣಕರ ಕಾರ್ಯಕ್ರಮ ನಿರೂಪಣೆ ಮಾಡಿದರು. ರಾಜೇಶ್ವರಿ ಹರಿಕಂತ್ರ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಹನಿಫಾ ಖಾನ್, ಭಾರತಿ ಐಸಾಕ್ ಮೊದಲಾದವರು ಉಪಸ್ಥಿತರಿದ್ದರು.