ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ 2022-23ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ 16ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಅಕಾಡೆಮಿಯ ಕಚೇರಿ ವೇಳೆಯಲ್ಲಿ (ಬೆಳಿಗ್ಗೆ 10ರಿಂದ ಸಂಜೆ 5.30) ಅರ್ಜಿ ಪಡೆಯಬಹುದು ಅಥವಾ https://sangeetqanrityaacademy.karnataka.gov.in ಮೂಲಕ ಹಾಗೂ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 25ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10ಸಾವಿರ ಶಿಷ್ಯವೇತನ ನೀಡಲಾಗುವುದು. ಒಬ್ಬ ಅಭ್ಯರ್ಥಿಗೆ ಒಮ್ಮೆ ಮಾತ್ರ ಶಿಷ್ಯವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕಚೇರಿ ದೂರವಾಣಿ ಸಂಖ್ಯೆ: 080- 2221 5072 ಗೆ ಸಂಪರ್ಕಿಸಬಹುದು ಎಂದು ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.