ಕುಮಟಾ: ಕಳೆದ ಒಂದು ವಾರದ ಹಿಂದೆ ಕವಲಕ್ಕಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕಾಂಗ್ರೆಸ್ ಕಾರ್ಯಕರ್ತ ಶಂಶಿರ್ ಅವರ ಮನೆಗೆ ಕಾಂಗ್ರೆಸ್ ಮುಖಂಡ ಮಂಜುನಾಥ ಎಲ್.ನಾಯ್ಕ ಅವರು ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು.
ಗಂಭೀರವಾಗಿ ಗಾಯಗೊಂಡ ಶಂಶಿರ್ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಹಳದಿಪುರದಲ್ಲಿರುವ ಅವರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಪಘಾತದ ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡ ಮಂಜುನಾಥ ನಾಯ್ಕ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ದೈರ್ಯ ತುಂಬಿದ್ದು, ಆದಷ್ಟು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದರು.
ಈ ಸಂದರ್ಭದಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಸಂದೇಶ ಶೆಟ್ಟಿ, ಮಹೇಶ ನಾಯ್ಕ, ಕಿರಣ ಭಂಡಾರಿ, ಗಣಪತಿ ಮೇಸ್ತಾ ಹಾಗೂ ತಾಲೂಕಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ನಾಯ್ಕ ಇದ್ದರು.