• Slide
    Slide
    Slide
    previous arrow
    next arrow
  • ದೇಶಪಾಂಡೆ ಆರ್‌ಸೆಟ್ ನಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ ವತಿಯಿಂದ 13 ದಿನಗಳ ಸಿ.ಸಿ ಟಿವಿ ಕ್ಯಾಮೆರಾ ಇನ್ಸ್ಟಾಲೇಷನ್ ಮತ್ತು ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ, ಮಹಿಳೆಯರಿಗಾಗಿ ಹೊಲಿಗೆ ತರಬೇತಿ ಮತ್ತು ಕಂಪ್ಯೂಟರ್ ಟ್ಯಾಲಿ ಉಚಿತ ತರಬೇತಿಯನ್ನು ಜುಲೈ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

    ತರಬೇತಿಯನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು/ಯುವತಿಯರು ಜುಲೈ. 4 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ, ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ಇರುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

    300x250 AD

    ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ 9483485489, 9482188780, 9632225123, 8197022501, 08284-295307, 220807ಗೆ ಸಂಪರ್ಕಿಸಬಹುದೆಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top