ಶಿರಸಿ:ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವರಿಂದ ಪತ್ರಿಕಾ ದಿನಾಚರಣೆ ಹಾಗೂ ಕೆ.ಶ್ಯಾಮರಾವ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜು.1 ಶುಕ್ರವಾರದಂದು ಬೆಳಿಗ್ಗೆ 11 ಗಂಟೆಗೆ ನಗರದ ಟಿ.ಎಂ.ಎಸ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೆರವೇರಿಸಲಿದ್ದು,ಅಧ್ಯಕ್ಷತೆಯನ್ನುಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಸುಬ್ರಾಯ್ ಭಟ್ ಬಕ್ಕಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ್ ರಾವ್, ಕೆ.ಯು.ಡಬ್ಲ್ಯೂ.ಜೆ ಕಾರ್ಯದರ್ಶಿ ನಿಂಗಪ್ಪ ಚಾವಡಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಕೆ. ಶ್ಯಾಮರಾವ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಅಶೋಕ್ ಹಾಸ್ಯಗಾರ್ ಅವರಿಗೆ ನೀಡಲಿದ್ದು, ಕೆ.ಯು.ಡಬ್ಲ್ಯೂ.ಜೆ ಕಾರ್ಯಕಾರಿಣಿ ಸದಸ್ಯ ಬಸವರಾಜ್ ಉಪಸ್ಥಿತರಿರಲಿದ್ದಾರೆ.ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.1ಕ್ಕೆ ಕೆ.ಶ್ಯಾಮರಾವ್ ಪ್ರಶಸ್ತಿ ಪ್ರದಾನ ಸಮಾರಂಭ
